5 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ ಎಂದು ವಿಧಾನಸೌಧದಲ್ಲಿ ನಡೆದ ಸಭೆ ಬಗ್ಗೆ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತನಾಡಿ, “ಇಂದು ಕರ್ನಾಟಕ ನೀರಾವರಿ ನಿಗಮ ಹಾಗೂ ಕೃಷ್ಣ ಭಾಗ್ಯ ಜಲ ನಿಗಮದ ನಿರ್ದೇಶಕರ ಮಂಡಳಿ ಸಭೆ ಮಾಡಿದೆವು. ಈ ನಿಗಮಗಳಲ್ಲಿ 5 ಸಾವಿರ ಕೋಟಿ ರೂಪಾಯಿಯಷ್ಟು ಕಾಮಗಾರಿ ತೆಗೆದುಕೊಳ್ಳುತ್ತಿದ್ದೇವೆ. ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ನಾವು ಯುಕೆಪಿ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚು ಆದ್ಯತೆ ನೀಡಿದ್ದೇವೆ. ಇದಕ್ಕೆ 70 ಸಾವಿರ ಕೋಟಿ ಹಣ ನೀಡಬೇಕಾಗಿದೆ. ಹೀಗಾಗಿ ಇತರೆ ಕೆಲಸಗಳನ್ನು ಮುಂದಿನ ಹಂತದಲ್ಲಿ ಕೈಗೊಳ್ಳಲಾಗುವುದು” ಎಂದು ಮಾಹಿತಿ ನೀಡಿದರು.