ಇಳಕಲ್: ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿ : ನಗರದಲ್ಲಿ ಬೃಹತ್ ಪ್ರತಿಭಟನೆ
Ilkal, Bagalkot | Oct 18, 2025 ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ಘಟನೆಯನ್ನು ಖಂಡಿಸಿ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆ ಹಾಗೂ ವಿವಿಧ ಸಮಾಜದ ವತಿಯಿಂದ ಇಲಕಲ್ಲ ನಗರದಲ್ಲಿ ಬೃಹತ್ ಪ್ರತಿಭಟನೆ ಇಂದು ಮಧ್ಯಾಹ್ನ ೩ ಗಂಟೆಗೆ ನಡೆಯಿತು. ಪ್ರತಿಭಟನಾ ಮೆರವಣಿಗೆ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಪ್ರಾರಂಭವಾಗಿ ಎಸ್.ಆರ್. ಕಂಠಿ ಸರ್ಕಲ್ಗೆ ಆಗಮಿಸಿ ತಹಸೀಲ್ದಾರ ಅಮರೇಶ ಪಮ್ಮಾರಗೆ ಮನವಿ ಸಲ್ಲಿಸಿದರು. ಶಾಸಕ ವಿಜಯಾನಂದ ಕಾಶಪ್ಪನವರ ಮಾತನಾಡಿಈ ಕೃತ್ಯ “ಪ್ರಜಾಪ್ರಭುತ್ವಕ್ಕೆ ಅವಮಾನ” ಎಂದು ಖಂಡಿಸಿ, ಆರೋಪಿಯಾಗಿರುವ ರಾಕೇಶ್ ಕಿಶೋರ್ನನ್ನು ದೇಶದಿಂದ ಗಡಿಪಾರು ಮಾಡುವಂತೆ ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶ