ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸಮಗ್ರ ಕಮಾಂಡ್ ಸೆಂಟರ್ ಕೇಂದ್ರವನ್ನು ಸಚಿವರಾದ ಈಶ್ವರ್ ಖಂಡ್ರೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಗಸ್ತು ಹೆಚ್ಚಳದ ಮೂಲಕ ಹಾಗೂ ಅರಣ್ಯದಂಚಿನ ಜನರಲ್ಲಿ ಸಹಬಾಳ್ವೆಯ ಬಗ್ಗೆ ಅರಿವು ಮೂಡಿಸುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ನಿಟ್ಟಿನಲ್ಲಿ ಕಮಾಂಡ್ ಕೇಂದ್ರ ಒಂದು ಯಶಸ್ವಿ ಪರಿಹಾರ ಆಗಲಿದೆ ಎಂದರು.