ಬೀದರ್: ಅ. 30ರೊಳಗೆ 300 ಕೋಟಿ ರೂ. ಬೆಳೆ ಹಾನಿ ಪರಿಹಾರ ; ನಗರದಲ್ಲಿ ಸಚಿವ ಖಂಡ್ರೆ
Bidar, Bidar | Oct 15, 2025 ಬೀದರ್ ಜಿಲ್ಲೆಯಲ್ಲಿ ಸೆಪ್ಟೆಂಬರ್ನಲ್ಲಿ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8500 ರೂ. ಪರಿಹಾರವೂ ಸೇರಿದಂತೆ ಒಟ್ಟಾರೆ 300 ಕೋಟಿ ರೂ. ಬೆಳೆ ಹಾನಿ ಪರಿಹಾರವನ್ನು ಅ.30ರೊಳಗೆ ಪಾವತಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ನಗರದಲ್ಲಿ ಬುಧವಾರ ಮಧ್ಯಾಹ್ನ 1 ಕ್ಕೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.