ಗ್ರಾಮೀಣ ಪ್ರದೇಶಗಳಲ್ಲಿರುವ ಜನರು ದೂರದ ನಗರ ಪ್ರದೇಶಗಳಿಗೆ ಸಂಚರಿಸಿ ಆರೋಗ್ಯ ಸೇವೆ ಪಡೆಯುವ ಹೊರೆಯನ್ನು ತಪ್ಪಿಸುವ ಸದುದ್ದೇಶದಿಂದ ಸುಮಾರಿಗೆ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿಗೆ ಶಾಸಕ ಎಂ ಆರ್ ಪಾಟೀಲ ಚಾಲನೆ ನೀಡಿದರು. ಕುಂದಗೋಳ ಕ್ಷೇತ್ರದ ಗುಡೇನಕಟ್ಟಿ ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 60 ಲಕ್ಷ ವೆಚ್ಚದಲ್ಲಿ "ಆರೋಗ್ಯ ಮತ್ತು ಕ್ಷೇಮ ಕೇಂದ್ರ" ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಬಸವರಾಜ ಯೋಗಪ್ಪನವರ ಉಪಸ್ಥಿತರಿದ್ದರು.