ಶಿವಮೊಗ್ಗ: ಗ್ರಾಮ ಲೆಕ್ಕಾಧಿಕಾರಿಗಳನ್ನು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಿ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಮನವಿ
ಸಾಗರ ಪಟ್ಟಣದಲ್ಲಿ ಕೆಲವು ಗ್ರಾಮ ಲೆಕ್ಕಾಧಿಕಾರಿಗಳು ಕಚೇರಿ ಮಾಡಿಕೊಂಡಿದ್ದಾರೆ.ರೈತರು ಗ್ರಾಮ ಲೆಕ್ಕಾಧಿಕಾರಿಗಳನ್ನು ಹುಡುಕಿಕೊಂಡು ಪಟ್ಟಣಕ್ಕೆ ಬರುವ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಗ್ರಾಮ ಲೆಕ್ಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೆಲಸ ಮಾಡುವಂತೆ ಸೂಚನೆ ನೀಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ತಿಳಿಸಿದ್ದಾರೆ. ಸೋಮವಾರ ಸಾರ್ವಜನಿಕರ ದೂರಿನ ಹಿನ್ನೆಲೆ ದಿಢೀರ್ ಭೇಟಿ ನೀಡಿದ ಅವರು ತಹಶೀಲ್ದಾರ್ ಜೊತೆ ಈ ಕುರಿತು ಚರ್ಚೆಯನ್ನ ನಡೆಸಿದರು. ಅಲ್ಲದೆ ಜನರನ್ನು ಕಚೇರಿಗೆ ಓಡಾಡಿಸಬೇಡಿ.ಅದರಲ್ಲಿಯೂ ಹಳ್ಳಿಗಳಿಂದ ಬಂದವರು ತಮ್ಮ ಕೆಲಸ ಮಾಡಿಕೊಡಲು ದಿನಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.