ಮಂಗಳೂರು: ಎಲ್ಲಾ ವರ್ಗದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಕೊಟ್ಟಾರದಲ್ಲಿ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹೇಳಿಕೆ
ರಾಜ್ಯ ಹಿಂದುಳಿದ ವರ್ಗ ಆಯೋಗ ನಡೆಸುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಸಮಾಜದ ಎಲ್ಲಾ ವರ್ಗದ ಜನರ ಸಮೀಕ್ಷೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ತಿಳಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಪೂರ್ವ ಸಿದ್ಧತೆ ಪರಿಶೀಲನೆ ನಡೆಸಿ ಮಾತನಾಡಿದರು.