ಜೆಡಿಎಸ್-ಬಿಜೆಪಿ ನಡುವೆ ಸಮನ್ವಯ ಸಮಿತಿ ರಚನೆ ವಿಚಾರಕ್ಕೆ ಸಂಬಂಧಿಸಿ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ವಿಜಯೇಂದ್ರ ಅವ್ರು, ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡಿದ್ದೀವಿ. ರಾಜ್ಯ ಮಟ್ಟದ್ದು, ಬೆಂಗಳೂರಿಗೆ ಸಮನ್ವಯ ಸಮಿತಿ ರಚನೆ ಆಗಬೇಕು, ತೀರ್ಮಾನ ಆಗಿದೆ. ಸದ್ಯದಲ್ಲೇ ಅದರ ಬಗ್ಗೆ ತೀರ್ಮಾನ ಆಗಿದೆ, ಈಗಾಗಲೇ ನಮ್ಮ ಪಕ್ಷದಲ್ಲಿ ಸಭೆ ಆಗಿದೆ. ಕೋರ್ ಕಮಿಟಿ ರಚನೆ ಒಂದು ಸಮಿತಿ ಮಾಡೋಕೆ ತೀರ್ಮಾನ ಮಾಡಿದ್ದೇವೆ. ಮುಂದಿನ 8-10 ದಿನಗಳಲ್ಲಿ ತೀರ್ಮಾನ ಆಗುತ್ತೆ ಎಂದರು.