ಶಿವಮೊಗ್ಗ: ರಸ್ತೆಗಳ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ಶಿವಮೊಗ್ಗದಲ್ಲಿ ಪಾಲಿಕೆ ಆಯುಕ್ತರಿಗೆ ಮನವಿ
ಶಿವಮೊಗ್ಗ ನಗರದ ಸವಳಂಗ ಮುಖ್ಯರಸ್ತೆ ಹಾಗೂ ಮೇಲ್ಸೇತುವೆಯ ಸರ್ವೀಸ್ ರಸ್ತೆಗಳ ಅವ್ಯವಸ್ಥೆ ಯಿಂದ ಆ ಭಾಗದ ಜನರು ಸಂಕಷ್ಟಕ್ಕೊಳಗಾಗಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಮಹಾನಗರಪಾಲಿಕೆಯ ಮಾಜಿ ಪಾಲಿಕೆ ಸದಸ್ಯ ವಿಶ್ವಾಸ್ ಮತ್ತು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಈ.ಕಾಂತೇಶ್ ಜಿಲ್ಲಾಧಿಕಾರಿಗಳಿಗೆ ಮತ್ತು ಮಹಾನಗರ ಪಾಲಿಕೆಯ ಆಯುಕ್ತರಿಗೆ ಮಂಗಳವಾರ ಸಂಜೆ 4 ಗಂಟೆಗೆ ಮನವಿ ಸಲ್ಲಿಸಿದರು. ನಗರದ ಮುಖ್ಯರಸ್ತೆಯಾದ ಉಷಾ ನರ್ಸಿಂಗ್ ಹೋಮ್ ವೃತ್ತದಿಂದ ಎಲ್ಬಿಎಸ್ ನಗರದವರೆಗೆ ಮೇಲ್ ಸೇತುವೆಯ ಸರ್ವೀಸ್ ರಸ್ತೆಗಳು ಸಂಪೂರ್ಣವಾಗಿ ಸಂಚಾರಕ್ಕೆ ಉಪಯೋಗಕ್ಕೆ ಬಾರದ ರೀತಿಯಲ್ಲಿ ದುಸ್ಥಿತಿಗೆ ತಲುಪಿದ್ದು, ಯಾವುದೇ ರೀತಿಯ ದುರಸ್ಥಿ ಕಾರ್ಯ ಆಗಿಲ್ಲ.