ಚಾಮರಾಜನಗರ: ನಗರದಲ್ಲಿ ಕಬ್ಬು ಬೆಳೆಗಾರರ ಸಂಘದಿಂದ ಬೈಕ್ ರ್ಯಾಲಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘವು ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದ ತನಕ ಬೈಕ್ ರ್ಯಾಲಿ ನಡೆಸಿದರು. ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಆಕ್ರೋಶ ಹೊರಹಾಕಿದರು. ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ರೈತರ ವಿರುದ್ಧ ಹಾಕಿರುವ ಎಫ್ಐಆರ್ ರದ್ದುಗೊಳಿಸಬೇಕು, ಸಕ್ಕರೆ ಕಾರ್ಖಾನೆಗಳ ಮುಂದೆ ತಕ್ಷಣ ತೂಕದ ಯಂತ್ರ ಅಳವಡಿಸಬೇಕು, ಭತ್ತ ಖರೀದಿ ಕೇಂದ್ರಗಳನ್ನು ಹೋಬಳಿ ಮಟ್ಟದಲ್ಲಿ ತೆರೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.