ಚಿತ್ರದುರ್ಗ: ಚಿತ್ರದುರ್ಗದಲ್ಲಿ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಜಯಂತಿ ಆಚರಣೆ
ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಪ್ರಥಮ ಶಿಕ್ಷಣ ಸಚಿವ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.