ಕುಮಟಾ : ತಾಲೂಕಿನ ಗೋಕರ್ಣ ಪೊಲೀಸ್ ಠಾಣೆಯ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಸಹಕಾರದಡಿ ಗೋಕರ್ಣದ ವೀರಶೈವ ಸಭಾಭವನದಲ್ಲಿ ಮಾದಕ ದ್ರವ್ಯಗಳ ವಿರುದ್ಧ ಜಾಗೃತಿಗಾಗಿ ಸನ್ಮಿತ್ರ ಕಾರ್ಯಗಾರ ಹಾಗೂ ಆಪ್ತ ಸಮಾಲೋಚನಾ ಶಿಬಿರವನ್ನು ಇಂದು ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮಾದಕ ದ್ರವ್ಯಗಳ ಸೇವನೆಯಿಂದಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿ, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ನಮ್ಮನ್ನು ನಾವು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಆರೋಗ್ಯ ತಪಾಸಣೆಯನ್ನು ನಡೆಸಲಾಯಿತು.