ಶಹಾಬಾದ್ ತಾಲ್ಲೂಕಿನ ಎಚ್‌ಎಂಪಿ ಕಾರ್ಖಾನೆಯ ಜೆ.ಪಿ ಕಾಲೋನಿಯಲ್ಲಿ ತರಕಾರಿ ಮಾರಾಟಕ್ಕೆ ಹೋದ ವಯೋವೃದ್ಧ ಹನುಮಂತ ಎಂಬುವರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಕಾಲಿಗೆ ಗಂಭೀರವಾಗಿ ಕಚ್ಚಿದ ಪರಿಣಾಮ ಹೆಚ್ಚಿನ ರಕ್ತಸ್ರಾವವಾಗಿದ್ದು, ಅವರನ್ನು ತಕ್ಷಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬೀದಿ ನಾಯಿಗಳ ಹಾವಳಿ ತಡೆಯಲು ಹಲವು ಬಾರಿ ಮನವಿ ಸಲ್ಲಿಸಿದರೂ ಅಧಿಕಾರಿಗಳ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆಂದು ಬುಧವಾರ 5 ಗಂಟೆಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ...