ಪುತ್ತೂರು: ಸಂಟ್ಯಾರ್ ಎಂಬಲ್ಲಿ ಸರ್ಕಾರಿ ಬಸ್ ಕಾರು ನಡುವೆ ಅಪಘಾತ
ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರೊಂದರ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಸೋಮವಾರ ಮಧ್ಯಾಹ್ನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಆರ್ಯಾಪು ಗ್ರಾಮದ ಸಂಟ್ಯಾರ್ ಎಂಬಲ್ಲಿ ಸಂಭವಿಸಿದೆ. ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್ಸಿಗೆ, ಸುಳ್ಯ ಕಡೆಯಿಂದದ ಪುತ್ತೂರಿನತ್ತ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರು ತಿರುಗಿ ವಿರುದ್ಧ ದಿಕ್ಕಿನಲ್ಲಿ ನಿಂತಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ. ಆದರೆ ಕಾರಿನಲ್ಲಿ ಇದ್ದ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪವಾಡಸದೃಶವಾಗಿ ಪಾರಾಗಿದ್ದಾರೆ.