ಹೆಗ್ಗಡದೇವನಕೋಟೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಆದಿಚುಂಚನಗಿರಿ ಕಾಲೇಜಿನ ಸ್ನೇಹ ವಾಣಿಜ್ಯ ವಿಭಾಗದಲ್ಲಿ ತಾಲ್ಲೂಕಿಗೆ ಪ್ರಥಮ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಆದಿಚುಂಚನಗಿರಿ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಅಂಕ ಗಳಿಸಿ ತೇರ್ಗೆಡೆಯಾಗಿದ್ದು, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸ್ನೇಹ 581 ಅಂಕಗಳನ್ನು ಗಳಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದು, ಕಲಾ ವಿಭಾಗದಲ್ಲಿ ಪ್ರೀತಿ 571 ಅಂಕ ಗಳಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದೇ ರೀತಿ ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿನಿ ಮಾನಸ 575 ಅಂಕ ಪಡೆದು ತಾಲ್ಲೂಕಿಗೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ಬಗ್ಗೆ ಸಂಸ್ಥೆಯ ಪ್ರಾಂಶುಪಾಲ ಬೈರೇಗೌಡ ಗುರುವಾರ ಮಾಹಿತಿ ನೀಡಿದ್ದಾರೆ.