ಜಿಬಿಎ ವ್ಯಾಪ್ತಿಯಲ್ಲಿ ಸಂಚಾರ ಯುಕ್ತ ಯೋಜನೆಯಡಿ 47 ಕಿ.ಮೀ ಉದ್ದದ ಬಫರ್ ರಸ್ತೆಗಳ ಕಾಮಗಾರಿಯನ್ನು ಈ ತಿಂಗಳಾಂತ್ಯದೊಳಗೆ ಪ್ರಾರಂಭಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು ನಗರದಲ್ಲಿ ವಿವಿಧ ಇಲಾಖೆಗಳಿಂದ ನಡೆಯುವ ಕಾಮಗಾರಿಗಳ ಅನುಷ್ಠಾನದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳ ಕುರಿತು ಜಿಬಿಎ ಕಚೇರಿಯಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಹೆಚ್ಚುವರಿ ರಸ್ತೆಗಳನ್ನು ಒದಗಿಸಲು, ಕಾಲುವೆಗಳನ್ನು ರಕ್ಷಿಸಲು, ಬಫರ್ ವಲಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು, ಸುಸ್ಥಿರ ಸಾರಿಗೆಯನ್ನು ಉತ್ತೇಜಿಸಲು ಹಾಗೂ ನೆರೆಹೊರೆಯ ರಸ್ತೆಗಳನ್ನು ಬಲಪಡಿಸಲು ಸುಮಾರು 300 ಕಿ.ಮೀ ಉದ್ದದ ಬಫರ್ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ