ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರ ರಸ್ತೆ, ಹೊಸ ಯಲ್ಲಾಪುರ ಗ್ರಾಮದಲ್ಲಿ ಪಿಎಂಎವೈ ಯೋಜನೆಯಡಿ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಕಾರ್ಯಕ್ರಮ (ನ.29) ನಿಮಿತ್ತ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು, ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕರಾದ ಪ್ರಸಾದ್ ಅಬ್ಬಯ್ಯ ಅವರು ಸೋಮವಾರ ಸಭೆ ನಡೆಸಿ. ನಂತರ ಸ್ಥಳ ಪರಿಶೀಲಿಸಲಾಯಿತು. ಈ ವೇಳೆ ಜಿಲ್ಲಾಧಿಕಾರಿ ದಿವ್ಯಪ್ರಭು, ಮಹಾನಗರ ಪಾಲಿಕೆ ಆಯುಕ್ತರಾದ ರುದ್ರೇಶ ಗಾಳಿ, ಡಿಸಿಪಿ ಮಹಾನಿಂಗ ನಂದಗಾವಿ, ಡಿಸಿಪಿ ರವೀಶ, ಸ್ಲಂ ಬೋರ್ಡ್ ಸಿಇ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.