ಹಾವೇರಿ: ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಅ.16ರಂದು ಎಸ್ಪಿ ಕಚೇರಿ ಎದುರು ಧರಣಿ; ನಗರದಲ್ಲಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ
Haveri, Haveri | Oct 6, 2025 ಹಾವೇರಿ ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಅಕ್ಟೋಬರ್ 16ರ ಒಳಗಾಗಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಅಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ರೈತ ಮುಖಂಡ ಹನುಮಂತಪ್ಪ ಕಬ್ಬಾರ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.