ಗಜೇಂದ್ರಗಡ: ರಸ್ತೆ ಗುಂಡಿ ಮುಚ್ಚದೆ ನಿರ್ಲಕ್ಷ್ಯ ತೋರಿದ ರಾಜ್ಯ ಸರ್ಕಾರದ ವಿರುದ್ಧ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ರಸ್ತೆ ಗುಂಡಿಗಳನ್ನು ಮುಚ್ಚದೆ ನಿರ್ಲಕ್ಷ್ಯ ತೋರುತ್ತಿರುವ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರೋಣ ವಿಧಾನಸಭಾ ಕ್ಷೇತ್ರದ ಗಜೇಂದ್ರಗಡ ಪಟ್ಟಣದ ಗದಗ ರಸ್ತೆಯಲ್ಲಿ ಬಿಜೆಪಿ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ಮಾಜಿ ಸಚಿವ ಕಳಕಪ್ಪ ಬಂಡಿ ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.