ಶಿವಮೊಗ್ಗ: ಜಂಬರಘಟ್ಟ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ಅಪಘಾತ: ಬೈಕ್ ಸವಾರ ಸಾವು
ಹೊಳೆಹೊನ್ನೂರು ಸಮೀಪದ ಜಂಬರಘಟ್ಟ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಮೃತ ವ್ಯಕ್ತಿಯನ್ನು ಸೈಯದ್ ಆಹಮದ್(65) ಎಂದು ತಿಳಿದುಬಂದಿದೆ. ಶಿವಮೊಗ್ಗದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತದ ಸಂಭವಿಸಿದ್ದು, ಬೈಕ್ ಸವಾರ ಸೈಯದ್ ಆಹಮದ್ ಸ್ಥಳದಲ್ಲೇ ಸಾವನ್ನಪ್ಪಿದರೆ ಬೈಕ್ ಹಿಂಪತಿಯ ಸವಾರ ಆಯಾನ್ ಗಂಭೀರವಾಗಿ ಗಾಯಗೊಂಡಿದ್ದು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.