ಹಾವೇರಿ: ಜಾತಿಗಣತಿಯಲ್ಲಿ ವೀರಶೈವ ಲಿಂಗಾಯತ ಧರ್ಮ ಎಂದು ನಮೂದಿಸಿ ನಂತರ ಉಪಜಾತಿ ಬರೆಯಿಸಿ; ನಗರದಲ್ಲಿ ಅ.ಭಾ.ವೀ. ಮಹಾಸಭಾ ಜಿಲ್ಲಾಧ್ಯಕ್ಷ ಕೋರಿಶೆಟ್ಟರ್
Haveri, Haveri | Sep 16, 2025 ಅಖಿಲ ಭಾರತ ವೀರಶೈವ ಮಹಾಸಭಾ ಅಶ್ರಯದಲ್ಲಿಸೆ.19 ರಂದು ಹುಬಳ್ಳಿಯ ನೆಹರು ಮೈದಾನದಲ್ಲಿ ಏಕತಾ ಸಮಾವೇಶ ನಡೆಯಲಿದ್ದು, ಮಹಾಸಭಾದ ಗಣ್ಯರು ಹಾಗೂ ನಾಡಿನ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದಾರೆ. ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್ ಕೋರಿಶೆಟ್ಟರ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರದ ಹಿಂದುಳಿದ ವರ್ಗಗಳ ಆಯೋಗವು ಸೆ.22ರಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿಗಣತಿಯಲ್ಲಿ ಭಾಗವಹಿಸಿ ಎಂದರು.