ಮೊಳಕಾಲ್ಮುರು: ಚಿಕ್ಕೋಬನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ
ಮೊಳಕಾಲ್ಮುರು:- ಚಿಕ್ಕೋಬನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಸಂಪನ್ಮೂಲ ಇಲಾಖೆ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಬಿಜಿಕೆರೆ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಬಿಇಒ ನಿರ್ಮಲಾದೇವಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಓ. ಕರಿಬಸಪ್ಪ ಮಾತನಾಡಿ,ಶಾಲಾ ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿಲು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಪ್ರಮುಖ ಪಾತ್ರ ವಹಿಸಿದೆ. ಜಾನಪದ ಕಲೆ ಸಂಸ್ಕೃತಿ ಉಳಿಸಿಲು ಮತ್ತು ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ.