ರಾಮನಗರ: ಭವ್ಯವಾದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕ್ರಮ. ನಗರದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಹೇಳಿಕೆ.
ರಾಮನಗರ-- ನಗರದ ಹೊರವಲಯದ ಅರ್ಚಕರ ಹಳ್ಳಿ ಗ್ರಾಮದಲ್ಲಿ ಸಕಲ ಸೌಕರ್ಯವುಳ್ಳ ಸುಸಜ್ಜಿತ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ 30 ಗುಂಟೆ ಜಮೀನು ಕಾಯ್ದಿರಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಭವ್ಯವಾದ ಭವನ ನಿರ್ಮಿಸಲಾಗುವುದು ಎಂದು ಬುಧುವಾರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ (ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ (ದೌರ್ಜನ್ಯ ಪ್ರತಿಬಂಧ) ತಿದ್ದುಪಡಿ ಕಾಯ್ದೆ 2015ರ ಅನುಷ್ಠಾನ ಸಂಬಂಧ) ಸಂಬಂಧ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನ