ಮದ್ದೂರು: ಕೆ.ಶೆಟ್ಟಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಕೆಎಂ ಉದಯ್
Maddur, Mandya | Oct 11, 2025 ಮದ್ದೂರು ತಾಲ್ಲೂಕು ಕೆ.ಶೆಟ್ಟಹಳ್ಳಿ ಗ್ರಾಮದ ಪರಿಮಿತಿಯಲ್ಲಿ ಸಿಸಿ ಚರಂಡಿ ಮತ್ತು ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ 25 ಲಕ್ಷ ರೂ ವೆಚ್ಚದಲ್ಲಿ ಶಾಸಕ ಕೆ.ಎಂ.ಉದಯ್ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ಶಾಸಕ ಕೆ.ಎಂ.ಉದಯ್ ಅವರು ಶುಕ್ರವಾರ ಸಂಜೆ 5 ಗಂಟೆಯಲ್ಲಿ ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು, ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳು ಪೂರ್ಣಗೊಳ್ಳುವ ಮೂಲಕ ಜನರಿಗೆ ಅನುಕೂಲವಾಗುತ್ತಿದೆ ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ತಂದು ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವ ಮೂಲಕ ತಾಲೂಕಿನ ಜನತೆಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.