ಕಾಳಗಿ: ತೆಂಗಳಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪಿಡಿಓ/ಅಧ್ಯಕ್ಷರ ಭ್ರಷ್ಟಾಚಾರ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು
ಕಲಬುರಗಿ : ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ತೆಂಗಳಿ ಗ್ರಾಮ ಪಂಚಾಯತಿಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರ ಖಂಡಿಸಿ ಗ್ರಾಮ ಪಂಚಾಯತಿಗೆ ಬೀಗ ಜಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.. ನವೆಂಬರ್ 6 ರಂದು ಬೆಳಗ್ಗೆ 11 ಗಂಟೆಗೆ ಪಂಚಾಯತಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.. ಇನ್ನೂ ಪಿಡಿಓ ಮಲ್ಲಿಕಾರ್ಜುನ ಮತ್ತು ಅಧ್ಯಕ್ಷೆ ಗುಂಡಿಬಾಯಿ ರಾಠೋಡ್ ಸೇರಿಕೊಂಡು ಪಂಚಾಯತಿಯಲ್ಲಿ ಯೋಜನೆಗಳಲ್ಲಿ ಕೆಲಸ ಮಾಡದೇ ಹಣ ಕೊಳ್ಳೆ ಹೊಡೆದಿದ್ದಾರೆಂದು ಗ್ರಾಮಸ್ಥರು ಆರೋಪಿ ಪ್ರತಿಭಟನೆ ನಡೆಸುತ್ತಿದ್ದಾರೆ.