ದಾಂಡೇಲಿ : ನಗರದ ಹಳೆ ನಗರಸಭೆಯ ಮೈದಾನದಲ್ಲಿ ನಡೆಯುತ್ತಿರುವ ರಜತ ಸಂಭ್ರಮದ 25 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 25 ಸಾಧಕರಿಗೆ ಕಸಾಪ ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ಸಂಜೆ 4.00 ಗಂಟೆ ಸುಮಾರಿಗೆ ಗೌರವ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ ಮಾತನಾಡಿ ಈ ವೇದಿಕೆಯಲ್ಲಿ ಪುರಸ್ಕೃತಾರಾದವರು ನಮಗೆ ಅರ್ಜಿ ಸಲ್ಲಿಸಿ ಇಲ್ಲಿಗೆ ಬಂದಿಲ್ಲ, ಕಸಾಪ ಜಿಲ್ಲಾ ಸಮಿತಿ ಮತ್ತು ಕಸಾಪ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಆಯ್ಕೆ ಮಾಡಿ ಪುರಸ್ಕರಿಸಲಾಗುತ್ತಿದೆ. ಇದು 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ವಿಶೇಷತೆಯಾಗಿದೆ ಎಂದರು.