ಪಾವಗಡ: ಪಾವಗಡದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ
ಪಾವಗಡದ ನಯಾರ ಪೆಟ್ರೋಲ್ ಬಂಕ್ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪ್ರಯಾಣಿಕರು ಮತ್ತು ಚಾಲಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.