ದಾಂಡೇಲಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಅ. 31 ರಂದು ಶಾಸಕರ ನೇತೃತ್ವದಲ್ಲಿ ಪೂರ್ವ ಸಿದ್ದತಾ ಸಭೆ, ನಗರದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ
ದಾಂಡೇಲಿ : ಡಿಸೆಂಬರ್ ಎರಡನೇ ವಾರದಲ್ಲಿ ದಾಂಡೇಲಿಯಲ್ಲಿ ನಡೆಸಲು ಉದ್ದೇಶಿಸಿರುವ ಉತ್ತರ ಕನ್ನಡ ಜಿಲ್ಲಾ 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ದತಾ ಸಭೆ ಹಾಗೂ ಸ್ವಾಗತ ಸಮಿತಿ ರಚನಾ ಸಭೆಯು ಅಕ್ಟೋಬರ್ 31, ಶುಕ್ರವಾರ ಸಂಜೆ 4.30 ಗಂಟೆಗೆ ದಾಂಡೇಲಿಯ ತಾಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಶಾಸಕರಾದ ಆರ್.ವಿ. ದೇಶಪಾಂಡೆಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಬಿ.ಎನ್.ವಾಸರೆ ತಿಳಿಸಿದ್ದಾರೆ ಅವರು ಬುಧವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಈ ಬಗ್ಗೆ ಮಾಹಿತಿಯನ್ನು ನೀಡಿದರು.