ಕಲಬುರಗಿಯ ಆರ್.ಜಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆ ಹಾಗೂ ಇಬ್ಬರು ಮಕ್ಕಳ ಕಾಣೆಯಾದ ಪ್ರಕರಣ ದಾಖಲಾಗಿದೆ. ಕೇಶವರಾಜ ಎಂಬುವರ ಪತ್ನಿ ಭಿಮಬಾಯಿ (32) ಮತ್ತು ಇಬ್ಬರು ಮಕ್ಕಳು ಮನೆಯಿಂದ ನಾಪತ್ತೆಯಾಗಿದ್ದಾರೆ. ಜೊತೆಗೆ ಮನೆಯಲ್ಲಿದ್ದ ಹಣ ಮತ್ತು ಬಂಗಾರವೂ ತೆಗೆದುಕೊಂಡಿರಬಹುದೆಂದು ಪತಿ ಕೇಶವರಾಜ ದೂರಿನಲ್ಲಿ ಶಂಕೆ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಕುರಿತು ಪ್ರಕರಣ ದಾಖಲಿಸಿಕೊಂಡ ಆರ್ಜಿನಗರ್ ಠಾಣೆ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ಶುಕ್ರವಾರ ಏಳು ಗಂಟೆಗೆ ಮಾಹಿತಿ ನೀಡಿದ್ದಾರೆ..