ಉಡುಪಿ: ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಹಕ್ಕೊತ್ತಾಯ ಸಭೆ
Udupi, Udupi | Oct 15, 2026 ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಅಕ್ಟೋಬರ್ 17ರಂದು ಬ್ರಹ್ಮಾವರದ ಬಂಟರ ಭವನದಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದೆ. ಕರಾವಳಿ ಭಾಗದ ಜನರಿಗೆ ನ್ಯಾಯಾಂಗ ವ್ಯವಸ್ಥೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಈ ಸಭೆ ಆಯೋಜಿಸಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಮನವಿ ಮಾಡಿದೆ.