ಕೃಷ್ಣರಾಜಪೇಟೆ: ಪಟ್ಟಣದಲ್ಲಿ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಕಾರ್ಮಿಕರು ಹಾಗೂ ಕುಟುಂಬದ ಸದಸ್ಯರಿಗೆ ಕ್ರೀಡಾಕೂಟ
ಕೆ.ಆರ್.ಪೇಟೆ ಪಟ್ಟಣದಲ್ಲಿ ಪುರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರು ಹಾಗೂ ಕುಟುಂಬದ ಸದಸ್ಯರಿಗೆ ಕ್ರೀಡಾಕೂಟ ಜರುಗಿತು. ದೈನಂದಿನ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕೆಲಸ ಮಾಡುವ ಪೌರಕಾರ್ಮಿಕರು ಇಂದು ತಮ್ಮ ಒತ್ತಡದ ಕೆಲಸಗಳ ನಡುವೆ ಬಿಡುವು ಮಾಡಿಕೊಂಡು ಆಟೋಟಗಳಲ್ಲಿ ಭಾಗವಹಿಸುವ ಮೂಲಕ ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಭಾಗಿಯಾಗಿ ಸಂಭ್ರಮಿಸಿದರು. ಗುಂಡು ಎಸೆಯುವ ಮೂಲಕ ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ಪಂಕಜಾ ಪ್ರಕಾಶ್ ಮಾತನಾಡಿ, ಪೌರಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ನಮ್ಮ ಪುರಸಭಾ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ಪೌರಕಾರ್ಮಿಕರ ಕುಟುಂಬಗಳಿಗೆ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗ