ಹಳಿಯಾಳ: ಮದ್ನಳ್ಳಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ
ಹಳಿಯಾಳ : ತಾಲೂಕಿನ ಮದ್ನಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಬೆಳಿಗ್ಗೆ 11:30 ಗಂಟೆ ಸುಮಾರಿಗೆ ಶಾಸಕರಾದ ಆರ್ ವಿ ದೇಶಪಾಂಡೆ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ವಿವಿಧ ಇಲಾಖೆಯಿಂದ ವಿಶೇಷ ಅನುದಾನದಲ್ಲಿ ಮಂಜೂರಾದ ರೂ.60.00 ಲಕ್ಷ ವೆಚ್ಚದ ರಸ್ತೆ ಸುಧಾರಣಾ ಕಾಮಗಾರಿ, ರೂ.15.00 ಲಕ್ಷ ಮೊತ್ತದ ನೂತನ ಸಮುದಾಯ ಭವನದ ನಿರ್ಮಾಣ ಕಾಮಗಾರಿ ಹಾಗೂ ಪರಿಶಿಷ್ಟ ಜಾತಿಯ ವಸತಿ ಕಾಲೋನಿಗಳಲ್ಲಿ ರಸ್ತೆ ಸುಧಾರಣೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಆರ್ ವಿ ದೇಶಪಾಂಡೆ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.