ಕಾರವಾರ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮ
ಗುರುವಾರ ಮಧ್ಯಾಹ್ನ 12ಕ್ಕೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಪುಷ್ಪನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು ಕಿತ್ತೂರು ರಾಣಿ ಚೆನ್ನಮ್ಮ ಭರತ ಖಂಡದ ಸ್ವಾಭಿಮಾನದ ಪ್ರತೀಕ. ಅವರು ದೇಶಕ್ಕೆ ಸ್ವಾಭಿಮಾನದ ದಿಕ್ಸೂಚಿ ತೋರಿಸಿದ್ದಾರೆ. ಈ ದಿಕ್ಸೂಚಿಯಡಿ ನಾವೆಲ್ಲರೂ ನಡೆಯಬೇಕು ಎಂದರು. ಕಾರ್ಯಕ್ರಮದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸತೀಶ ನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ರಾಮಾ ನಾಯ್ಕ ಇನ್ನಿತರರು ಇದ್ದರು.