ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿ, ಪಾಲನೆ ಮತ್ತುನಿರ್ವಹಣೆ ಗ್ರಾಮೀಣ ಉಪವಿಭಾಗ, ಬಾಲರಾಜ್ ಅರಸ್ ರಸ್ತೆ, ರೈಲ್ವೆ ಸ್ಟೇಷನ್ ಹತ್ತಿರ ಇಲ್ಲಿ ಡಿ.18 ರಂದು ಬೆಳಿಗ್ಗೆ 11 ರಿಂದ 01 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಮಂಗಳವಾರ ಸಂಜೆ 5 ಗಂಟೆಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.