ಶಿವಮೊಗ್ಗ: ಸಾಗರ ತಾಲೂಕಿನ ಸಾಗರ ಸಿಗಂದೂರು ರಸ್ತೆಯಲ್ಲಿ ಚಲಿಸುತ್ತಿದ್ದ ಕಾಲಿನ ಮೇಲೆ ಬಿದ್ದ ಬೃಹತ್ ಮರ
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಾಗರ ಸಿಗಂದೂರು ರಸ್ತೆಯಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ. ಇನ್ನ ಅದೃಷ್ಟವಶಾತ್ ಭಾರಿ ದೊಡ್ಡ ಅನಾಹುತ ತಪ್ಪಿದೆ ಕಾರಿನಲ್ಲಿ ಇದ್ದಂತಹ ಪುನೀತ್ ಹಾಗೂ ರವಿ ಎಂಬುವರಿಗೆ ಗಾಯಗಳಾಗಿದ್ದು,ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಾರು ಸಂಪೂರ್ಣ ನಜಗುಜ್ಜಾಗಿದ್ದು.ಈ ಘಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.