ಸಾರಿಗೆ ಬಸ್ ಚಲಿಸುವಾಗ ಇಂಜಿನನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಚಾಲಕನ ಸಮಯಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದ ಘಟನೆ ಜೇವರ್ಗಿ ತಾಲೂಕಿನ ಮದರಿ ಗ್ರಾಮದಲ್ಲಿ ನಡೆದಿದೆ. ಮದರಿ-ಜೇವರ್ಗಿ ಮಾರ್ಗದಲ್ಲಿ ಸಂಚರಿಸುತ್ತಿದ್ದ ಜೇವರ್ಗಿ ಡಿಪೋಗೆ ಸೇರಿದ ಸಾರಿಗೆ ಬಸ್ ಇಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತು.. ಚಾಲಕ ತಕ್ಷಣ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಪರಿಣಾಮ ದೊಡ್ಡ ದುರಂತ ತಪ್ಪಿತು. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ನೀರು ಸುರಿದು ಬೆಂಕಿಯನ್ನು ನಂದಿಸಿದರು. ದಟ್ಟ ಹೊಗೆ ಆವರಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ಜೇವರ್ಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ 11 ಗಂಟೆ ಸುಮಾರಿಗೆ