ದೇವನಹಳ್ಳಿ: ಜಿಲ್ಲಾಡಳಿತಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯದೀಶರು
ಜಿಲ್ಲಾಡಳಿತ ಭವನದಲ್ಲಿ ವಿಶ್ವವಿಕಲಚೇತನರ ದಿನಾಚರಣೆ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯದೀಶರಾದ ಶ್ರೀ ಶೈಲ್ ಭೀಮ ಸೇನಾ ಬಾಗಡಿಯವರು ಉದ್ಘಾಟಿಸಿದರು