ಅಂಕೋಲ: ಬೆಲೆಕೇರಿ ಸಮುದ್ರದಲ್ಲಿ ಮುಳುಗಿ ವ್ಯಕ್ತಿ ಸಾವು
ಅಂಕೋಲಾ: ಅಂಕೋಲಾ ತಾಲೂಕಿನ ಬೆಲೇಕೇರಿಯಲ್ಲಿ ಸಮುದ್ರದಲ್ಲಿ ಮುಳುಗಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಭಾವಿಕೇರಿಯ ಆನಂದು ನಾಯ್ಡ್ (52) ಎಂದು ಗುರುತಿಸಲಾಗಿದೆ. ಅವರು ಕರಾವಳಿಯ ಸಾಂಪ್ರದಾಯಿಕ ಸಮುದ್ರ ಆಹಾರವಾದ ಚಿಪ್ಪಿಕಲ್ಲು (ಶೆಲ್ ಮೀನು) ಆರಿಸಲು ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.