ಇಲಾಖಾ ಅಧಿಕಾರಿಗಳು ಮತ್ತು ಸಿಬ್ಬಂದಿ ಪೋಲಿಯೋ ಲಸಿಕೆಯ ಮಾದರಿಯಲ್ಲಿ ಎಲ್ಲಾ ಹಳ್ಳಿಗಳಲ್ಲಿ ಲಸಿಕೆ ಅಭಿಯಾನ ನಡೆಸಬೇಕು. ರೈತ ಬಾಂಧವರು ತಮ್ಮಲ್ಲಿರುವ ಎಲ್ಲಾ ದನ, ಎಮ್ಮೆ ಮತ್ತು 3 ತಿಂಗಳ ಮೇಲ್ಪಟ್ಟ ಕರುಗಳಿಗೆ ತಪ್ಪದೇ ಲಸಿಕೆ ಹಾಕಿಸಿ ಸಾಂಕ್ರಾಮಿಕ ರೋಗದಿಂದಾಗುವ ಆರ್ಥಿಕ ನಷ್ಟ ತಪ್ಪಿಸಬೇಕು. ಈ ಕಾರ್ಯಕ್ರಮಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮಂಗಳವಾರ 12 ಗಂಟೆಗೆ ಜರುಗಿದೆ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಭಜಂತ್ರಿ ಅವರು ಹೇಳಿದರು. ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ 8ನೇ ಸುತ್ತಿನ ಕಾಲು ಬಾಯಿ ರೋಗದ ಉಚಿತ ಸಾಮೂಹಿಕ ಟ