ಬಳ್ಳಾರಿ: ಬಳ್ಳಾರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ: 60 ತಂಡಗಳ ಭಾಗಿ
ಬಳ್ಳಾರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ 2026-27ರಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 60 ತಂಡಗಳು ಭಾಗವಹಿಸಿದ್ದವು. ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನೆ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ದೃಷ್ಟಿಕೋನ ಬೆಳೆಸಿಕೊಳ್ಳಲು ಕರೆ ನೀಡಿದರು.