ಜಗಳೂರು: ಬಿದರಕೆರೆ ಗ್ರಾಮದಲ್ಲಿ ತಾಲ್ಲೂಕು ಮಟ್ಟದ ಪೋಷಣ ಪಕ್ವಾಡ ಕಾರ್ಯಕ್ರಮ, ಸಿಡಿಪಿಒ ಬೀರೇಂದ್ರ ಕುಮಾರ್ ಭಾಗಿ
ಬಿದರಕೆರೆ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ತಾಲೂಕು ಮಟ್ಟದ ಪೋಷಣ ಪಕ್ವಾಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಬೀರೇಂದ್ರ ಕುಮಾರ್ ಮಾತನಾಡಿ, ಇದು 15 ದಿನಗಳ ಕಾರ್ಯಕ್ರಮವಾಗಿದ್ದು, ಇದರಲ್ಲಿ ಮಕ್ಕಳ ಕಾಳಜಿಯ ಶಿಕ್ಷಣದ ಬಗ್ಗೆ ಹಾಗೂ ಸಾಂಪ್ರದಾಯಿಕ ಆಹಾರ ಪದ್ಧತಿಗಳ ಬಗ್ಗೆ ತಿಳಿಸಲಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಅನುರಾಧ ಜಿ.ಆರ್. ಪೋಷಣ ಅಭಿಯಾನ ತಾಲೂಕು ಸಂಯೋಜಕ ಈಶ್ವರ್ ಸೇರಿದಂತೆ ಗ್ರಾಮದ ಮುಖಂಡರು, ಪೋಷಕರು ಮತ್ತಿತರು ಇದ್ದರು.