ದೇವದುರ್ಗ: ಅಧಿವೇಶನ ಬಿಟ್ಟು ಬಂದು ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಶಾಸಕರು
ದೇವದುರ್ಗದ ಅಂಜಳ ಸಮೀಪ ಸಂಭವಿಸಿದ ಬಸ್ ಪಲ್ಟಿ ದುರಂತದ ಮಾಹಿತಿ ತಿಳಿಯುತ್ತಿದ್ದಂತೆ, ದೇವದುರ್ಗ ಕ್ಷೇತ್ರದ ಶಾಸಕರಾದ ಕರೆಮ್ಮ. ಜಿ. ನಾಯಕ ಅವರು, ಬೆಳಗಾವಿಯಲ್ಲಿ ನಡೆಯುತ್ತಿದ್ದ ವಿಧಾನಮಂಡಲ ಅಧಿವೇಶನವನ್ನು ಅರ್ಧಕ್ಕೆ ನಿಲ್ಲಿಸಿ ಕ್ಷೇತ್ರಕ್ಕೆ ದೌಡಾಯಿಸಿದ್ದಾರೆ. ಅಪಘಾಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳನ್ನು ಶಾಸಕರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದರು.