ಶಿವಗಂಗ ಗ್ರಾಮದಲ್ಲಿಂದು ಪೊಲೀಸ್ ಇಲಾಖೆ ವತಿಯಿಂದ ಬೀಟ್ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು. ಗುರುವಾರ ಮಧ್ಯಾಹ್ನ 12 ಗಂಟೆಗೆಬಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಆರ್ ರವರ ನೇತೃತ್ವದಲ್ಲಿ ಚಿತ್ರಹಳ್ಳಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಗಂಗ ಗ್ರಾಮದಲ್ಲಿ ಬೀಟ್ ಸಭೆಯನ್ನು ಆಯೋಜಿಸಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಾರ್ವಜನಿಕರ ಪಾತ್ರದ ಬಗ್ಗೆ ಹಾಗೂ ತುರ್ತು ಸಮಯದಲ್ಲಿ ಸೇವೆಗಳನ್ನು ಪಡೆದುಕೊಳ್ಳುವ ಬಗ್ಗೆ ತಿಳಿಸಿಕೊಡಲಾಯಿತು