ಮೂಡಿಗೆರೆ: ಹೈಟೆಕ್ ದನಗಳ್ಳರ ದನ ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ.! ವಿಡಿಯೋ ವೈರಲ್.!
ರಾತ್ರಿ ವೇಳೆಯಲ್ಲಿ ರಸ್ತೆಯಲ್ಲಿರುವ ದನಗಳನ್ನು ಕಳ್ಳತನ ಮಾಡುವ ಹೈಟೆಕ್ ದನಗಳ ಹಾವಳಿ ಹೆಚ್ಚಾಗಿದ್ದು, ದನ ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದ ಚಂದನ್ ಕೆಫೆ ಬಳಿ ಬೆಳಗಿನ ಜಾವ 4:30ರ ಸುಮಾರಿಗೆ ಟಾಟಾ ಸುಮೋದಲ್ಲಿ ಬಂದ ಕಳ್ಳರು ದನ ಕಳ್ಳತನ ಮಾಡಿ ಪರಾರಿಯಾಗಿದ್ದು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸರಿಯಾಗಿದೆ. ಮೂರ್ನಾಲ್ಕು ದಿನಗಳ ಹಿಂದೆ ಈ ಘಟನೆ ನಡೆದಿದ್ದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು ಸಾಕಷ್ಟು ಆತಂಕವನ್ನು ಹೆಚ್ಚಿಸಿದೆ.