BREAKING NEWS || ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆ ಅಣಕು ಪ್ರದರ್ಶನ
ಚಿತ್ರದುರ್ಗ: ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳಬೇಕಾದ ಕಾರ್ಯಾಚರಣೆ ಕುರಿತು ಅಣಕು ಪ್ರದರ್ಶನ (Mock Drill) ನಡೆಸಲಾಯಿತು.
ಪೊಲೀಸ್ ಅಧೀಕ್ಷಕರಾದ ಕುಶಲ್ ಚೌಕ್ಸೆ, ಐಪಿಎಸ್ ಅವರ ನಿರ್ದೇಶನದಂತೆ, ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಉಪಾಧೀಕ್ಷಕರ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಈ ಅಣಕು ಪ್ರದರ್ಶನ ಆಯೋಜಿಸಲಾಗಿತ್ತು.
ತುರ್ತು ಸೇವಾ ಇಲಾಖೆಗಳು ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮದಕರಿ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮತ್ತು ಗಾಂಧಿ ಸರ್ಕಲ್ಗಳಲ್ಲಿ ಅಣಕು ಪ್ರದರ್ಶನ ನಡೆಸಿ, ಅವಘಡ ಸಂಭವಿಸಿದ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆಯನ್ನು ಹೇಗೆ ಕೈಗೊಳ್ಳಬೇಕು ಎಂಬುದನ್ನು ಪ್ರಾಯೋಗಿಕವಾಗಿ ಪ್ರದರ್ಶಿಸಲಾಯಿತು.
ಶೋಭಾಯಾತ್ರೆಯ ಸಂದರ್ಭದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದರೂ ಸಮನ್ವಯದಿಂದ ತ್ವರಿತವಾಗಿ ಕಾರ್ಯನಿರ್ವಹಿಸುವ ಉದ್ದೇಶದಿಂದ ಈ Mock Drill ನಡೆಸಲಾಗಿದೆ.
#ನಮ್ಮ_ಚಿತ್ರದುರ್ಗ_ಜಿಲ್ಲಾ_ಪೊಲೀಸ್ #ChitradurgaPolice #KarnatakaStatePolice #MockDrill #HinduMahaganapathi #Chitradurga
Yadgir, Yadgir | Sep 29, 2026