ಚಿತ್ರದುರ್ಗ: ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ನಗರದಲ್ಲಿ ಪ್ರತಿಭಟನೆ
ನಿವೇಶನ ರಹಿತ ಕುಟುಂಬಗಳಿಗೆ ಸರ್ಕಾರಿ ಭೂಮಿ ಗುರುತಿಸಿ ನಿವೇಶನ ಮಂಜೂರು ಮಾಡುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗುರುವಾರ ಮಧ್ಯಾಹ್ನ 12 ಗಂಟೆಗೆ ಸ್ಲಂ ಜನರ ಸಂಘಟನೆ ಜಿಲ್ಲಾ ಸಮಿತಿ ವತಿಯಿಂದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ