ನಂಜನಗೂಡು: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬ ಆಚರಣೆ; ರಂಜಾನ್ ಆಚರಣೆಯಲ್ಲಿ ಭಾಗಿಯಾದ ಶಾಸಕ ದರ್ಶನ್ ಧ್ರುವನಾರಾಯಣ್
ನಂಜನಗೂಡು: ತಿಂಗಳು ಪೂರ್ತಿ ಉಪವಾಸ ವ್ರತ ಆಚರಣೆಯ ನಂತರ ಮುಸ್ಲಿಂ ಬಾಂಧವರು ಇಂದು ಗುರುವಾರ ಸಡಗರ ಸಂಭ್ರಮದಿಂದ ರಂಜಾನ್ ಹಬ್ಬವನ್ನು ಆಚರಣೆ ಮಾಡಲಾಯಿತು. ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ರಂಜಾನ್ ಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಶುಭಾಶಯ ಕೋರಿದ್ದಾರೆ. ಬುಧವಾರ ಸಂಜೆಯಿಂದಲೇ ರಂಜಾನ್ ಆಚರಣೆಗೆ ವ್ಯಾಪಕ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಅದರಲ್ಲೂ, ಇಡೀ ರಾತ್ರಿ ಮುಸ್ಲಿಂ ಬಾಂಧವರು ಜಾಗರಣೆ ಆಚರಿಸುವ ಮೂಲಕ ಗುರುವಾರ ಹಬ್ಬವನ್ನು ಅದ್ದೂರಿಯಾಗಿ ಬರ ಮಾಡಿಕೊಂಡರು. ನಂಜನಗೂಡಿನ ಎಂ.ಜಿ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲೀಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.