ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಡಿ.11, ಗುರುವಾರ ಬೆಳಿಗ್ಗೆ 11ಕ್ಕೆ ಸಿರುಗುಪ್ಪ ಶಾಸಕ ನಾಗರಾಜ್ ಬಿ.ಎಂ. ಅವರ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಸಿರಗುಪ್ಪ ಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಐಟಿಐ ಅನ್ನು 2014-15 ರಲ್ಲಿ ಮಂಜೂರು ಮಾಡಿದ್ದು, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾಗಿರುವ ಉಪಕರಣಗಳು ಲಭ್ಯವಿಲ್ಲದೆ ತೊಂದರೆಯಾಗಿದೆ ಎಂಬುದಾಗಿ ಸರ್ಕಾರದ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್,