ಹುಬ್ಬಳ್ಳಿ ನಗರ: ನವೆಂಬರ್ 29 ರಂದು ಸ್ಲಂ ಬೋರ್ಡ್ ವತಿಯಿಂದ ಮನೆಗಳ ಹಂಚಿಕೆ ಕಾರ್ಯಕ್ರಮ ನಡೆಯಲಿದೆ: ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್
ನವೆಂಬರ್ 29 ರಂದು ಸ್ಲಂ ಬೋರ್ಡ್ ವತಿಯಿಂದ ಮನೆಗಳ ಹಂಚಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಭಾನುವಾರ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಸರ್ಕಾರ ಜನಪ್ರಿಯ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದೆ. ಅದರಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಸ್ತುವಾರಿ ವೇಣುಗೋಪಾಲ, ಸಿಎಂ, ಡಿಸಿಎಂ ಭಾಗವಹಿಸಲಿದ್ದಾರೆ ಎಂದರು.