ಚಿಟಗುಪ್ಪ: ಸೌಜನ್ಯ ಕೊಲೆ ಪ್ರಕರಣ ಖಂಡಿಸಿ , ಪಟ್ಟಣದಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ
ಧರ್ಮಸ್ಥಳದಲ್ಲಿ ಸೌಜನ್ಯ ಕೊಲೆ ಪ್ರಕರಣವನ್ನು ಖಂಡಿಸಿ ತಪ್ಪಿತಸ್ಥರ ವಿರುದ್ಧ ತನಿಖೆಗೆ ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ವತಿಯಿಂದ ಶನಿವಾರ ಮಧ್ಯಾಹ್ನ 3ಕ್ಕೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ರೇಷ್ಮಾ ಹಂಸರಾಜ್, ಕೃಷಿ ಕುಲಿ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಅಂಬುಬಾಯಿ ಬಾಡಿಗೆ ಜನವರಿ ಮಹಿಳಾ ಸಂಘಟನೆ ತಾಲೂಕು ಉಪಾಧ್ಯಕ್ಷ ಮಂಗಲ ಶ್ರೀದೇವಿ ಸೇರಿದಂತೆ ಇನ್ನೂ ಅನೇಕರು ಹಾಜರಿದ್ದರು.